Monday, July 7, 2025
spot_imgspot_img
spot_imgspot_img

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಟಿ. ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

- Advertisement -
- Advertisement -

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಟಿ. ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆಯು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲದ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ದೀಪ ಬೆಳಗಿಸಿ ಉದ್ಘಾಟನೆ ಮಾಡಿ, ಕಾರ್ಯಕಾರಿಣಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ರಾಜ್ಯ ಎಸ್.ಟಿ. ಮೋರ್ಚಾ ಉಪಾಧ್ಯಕ್ಷರಾದ ಮಂಜುನಾಥ್ ಎನ್.ಎಸ್., ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷರಾದ ಚೆನ್ನಕೇಶವ ಅರಸಮಜಲ್, ಜಿಲ್ಲಾ ಉಪಾಧ್ಯಕ್ಷರಾದ ಕೊರಗಪ್ಪ ನಾಯ್ಕ್, ಜಿಲ್ಲಾ ಕಾರ್ಯದರ್ಶಿ ಜಯಶ್ರೀ ಕರ್ಕೇರ ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಕೋವಿಡ್ ಸಮಯದಲ್ಲಿ ತನ್ನ ಜೀವನದ ಹಂಗು ತೊರೆದು ಅಂತ್ಯಸಂಸ್ಕಾರ ನಡೆಸಿದ ಸಂತೋಷ್ ನಾಯ್ಕ್ ಅತ್ತಾಜೆ ಇವರನ್ನು ಮೋರ್ಚಾ ವತಿಯಿಂದ ಗೌರವಿಸಲಾಯಿತು. ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಹರೀಶ್ ಬಿಜತ್ರೆ ಸ್ವಾಗತಿಸಿ, ಮೊತ್ತೋರ್ವ ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಯನ್. ಎರ್ಮೆನಾಡ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದಗೈದರು.

- Advertisement -

Related news

error: Content is protected !!