Wednesday, July 22, 2026
spot_imgspot_img
spot_imgspot_img

ಬಂಟ್ವಾಳ: ನೂತನ ಸಚಿವರಾಗಿ ಆಯ್ಕೆಗೊಂಡ ಸುನಿಲ್ ಕುಮಾರ್ ಅವರು ಪೊಳಲಿ ಕ್ಷೇತ್ರಕ್ಕೆ ಭೇಟಿ

- Advertisement -
- Advertisement -
driving

ಬಂಟ್ವಾಳ: ನೂತನ ಸಚಿವರಾದ ಸುನಿಲ್ ಕುಮಾರ್ ಅವರು ಪೊಳಲಿ ರಾಜರಾಜೇಶ್ವರಿ ಕ್ಷೇತ್ರಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ಶುಕ್ರವಾರ ತಾನು ಸಚಿವನಾಗಿ ಅಧಿಕಾರ ವಹಿಸಿಕೊಳ್ಳುವುದಕ್ಕೆ ಪೂರ್ವಭಾವಿಯಾಗಿ ರಾಜರಾಜೇಶ್ವರಿ ಕ್ಷೇತ್ರಕ್ಕೆ ಭೇಟಿನೀಡಿ ಆಶೀರ್ವಾದ ಪಡೆದಿದ್ದೇನೆ.

ಎಲ್ಲರ ಒಳಿತಿಗಾಗಿ ಕೆಲಸ ಮಾಡುತ್ತೇನೆ ಹಾಗೂ ಇಂಧನ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸತನವನ್ನು ತರುವ ಮೂಲಕ ರಾಜ್ಯದ ಜನತೆಗೆ ಒಳಿತನ್ನು ಮಾಡುತ್ತೇನೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ದೇವಳದ ಕಾರ್ಯನಿರ್ವಣಾಧಿಕಾರಿ ಪಿ.ಜಯಮ್ಮ, ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆ ಗುತ್ತು, ಯು.ತಾರನಾಥ ಆಳ್ವ,

ಚೇರ ಸೂರ್ಯನಾರಾಯಣ ರಾವ್, ಪಿ.ಮಾದವ ಭಟ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಗಿರಿಪ್ರಕಾಶ್ ತಂತ್ರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ವೆಂಕಟೇಶ ನಾವುಡ, ಯಶವಂತ ಫೊಳಲಿ, ನಂದರಾಮ ರೈ, ಪುರುಷೋತ್ತಮ ಶೆಟ್ಟಿ, ಪುಷ್ಪರಾಜ್ ಚೌಟ ಹಾಗೂ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

- Advertisement -

Related news

error: Content is protected !!