Tuesday, September 22, 2026
spot_imgspot_img
spot_imgspot_img

ಸೌತಡ್ಕ: ದರೋಡೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಧರ್ಮಸ್ಥಳ: ಇಲ್ಲಿನ ಸೌತಡ್ಕ ಸಮೀಪದ ಕೌಕ್ರಾಡಿ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿ ಎಂಬವರ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನೆಲ್ಯಾಡಿ ಹೊಸಮಜಲು ನಿವಾಸಿ ಚಂದ್ರಶೇಖರ ಶೆಟ್ಟಿ (50) ಹಾಗೂ ಸೂರಿಂಜೆಯ ದಾವೂದ್ ಹಕೀಂ (36) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಡಿಸೆಂಬರ್ ನಲ್ಲಿ ತುಕ್ರಪ್ಪ ಶೆಟ್ಟಿ ಅವರ ಮನೆಗೆ ನುಗ್ಗಿದ ದರೋಡೆಕೋರರು ತುಕ್ರಪ್ಪ ಶೆಟ್ಟಿ ಹಾಗೂ ಅವರ ಪತ್ನಿ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂಪಾಯಿಯ ಚಿನ್ನಾಭರಣ ದೋಚಿದ್ದರು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಇದೀಗ ಇಬ್ಬರನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!