- Advertisement -
- Advertisement -

ವಿಟ್ಲ: ಬಂಟ್ವಾಳ ತಾಲೂಕು ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಗೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ.
ಘಟನೆ ಬಗ್ಗೆ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ)ಮಾಣಿಲ ಶಾಖೆ ವ್ಯವಸ್ಥಾಪಕ ಜಯರಾಮ ಅವರು ದೂರು ನೀಡಿದ್ದಾರೆ.

ಸಂಘದ ಮೇಲ್ಚಾವಣಿ ಹಂಚನ್ನು ಕಳ್ಳರು ತೆಗೆದು ಒಳಗಡೆ ಬಂದು ಕಚೇರಿಯ ಕಪಾಟಿನ ಬಾಗಿಲು ತೆಗೆದು ಹುಡುಕಾಡಿದ್ದು ಯಾವುದೇ ಹಣ, ಬೆಲೆ ಬಾಳುವ ವಸ್ತು ಸಿಗದೆ ಕಳವಿಗೆ ಪ್ರಯತ್ನಿಸಿದ್ದಾರೆ.
ಸೇಫ್ ಲಾಕರನಲ್ಲಿ ಇದ್ದ ಯಾವುದೇ ಬೆಲೆ ಬಾಳುವ ವಸ್ತುಗಳು ಹಾಗೂ ಅಡಿಕೆ ,ಕೃಷಿ ಕಾಳುಮೆಣಸು ಕಳವು ಆಗಿಲ್ಲ. ಬೆಳಿಗ್ಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.




- Advertisement -








