Saturday, June 28, 2025
spot_imgspot_img
spot_imgspot_img

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಚಕಮಕಿ; ಓರ್ವ ಉಗ್ರನ ಹತ್ಯೆ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಮತ್ತೊಮ್ಮೆ ಗುಂಡಿನ ಚಕಮಕಿ. ಇಂದು ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ.

ಎನ್ ಕೌಂಟರ್ ನಲ್ಲಿ ಒಬ್ಬ ಸಿಆರ್ ಪಿಎಫ್, ಸೇನಾ ಸಿಬ್ಬಂದಿ, ಇಬ್ಬರು ನಾಗರಿಕರಿಗೆ ಗಾಯಗಳಾಗಿದ್ದು ಎಲ್ಲರನ್ನೂ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ, ಇನ್ನೂ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

 ಸಾಂದರ್ಭಿಕ ಚಿತ್ರ

ಇಂದು ನಸುಕಿನ ಜಾವ ಉಗ್ರರ ಚಲನವಲನದ ಬಗ್ಗೆ ಮಾಹಿತಿ ಪಡೆದ ಸೇನಾ ಯೋಧರು ಕುಲ್ಗಾಮ್ ನಲ್ಲಿ ಕಾರ್ಯಾಚರಣೆ ನಡೆಸಿದರು, ಈ ವೇಳೆ ಉಗ್ರರು ಬಿಎಸ್ ಎಫ್ ಬೆಂಗಾವಲು ಮೇಲೆ ಗುಂಡಿನ ದಾಳಿ ಆರಂಭಿಸಿದರು. ಉಗ್ರರು ಸೆರೆ ಸಿಕ್ಕಿದ್ದಾರೆ. ಪೊಲೀಸ್ ಹಿರಿಯ ಅಧಿಕಾರಿಗಳು, ಸಿಆರ್ ಪಿಎಫ್ ಮತ್ತು ಸೇನಾಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ ಎಂದು ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

- Advertisement -

Related news

error: Content is protected !!