- Advertisement -
- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಆಗಸ್ಟ್ 30ರ ತನಕ ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ಆಗಸ್ಟ್ 30 ಬೆಳಗ್ಗೆ 6ರ ತನಕ ಹೊಸ ಆದೇಶ ಅನ್ವಯವಾಗಲಿದೆ.
ಜಿಲ್ಲಾಧಿಕಾರಿಗಳ ಆದೇಶದಲ್ಲಿ ಏನಿದೆ?
- ಜಿಲ್ಲೆಯಲ್ಲಿರುವ ಎಲ್ಲಾ ಪಬ್, ಬಾರ್ ಹಾಗೂ ರೆಸ್ಟೋರೆಂಟ್ ಗಳು ತೆರೆಯಬಹುದು.
- ಆದರೆ, ಸೋಮವಾರದಿಂದ ಶುಕ್ರವಾರ ತನಕ ರಾತ್ರಿ 7ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
- ರಾತ್ರಿ 9ರಿಂದ ಬೆಳಗ್ಗೆ 6ರವರೆಗೆ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ.
- ವಾರಾಂತ್ಯ ಕರ್ಫ್ಯೂ ಆಗಸ್ಟ್ 30ರ ತನಕ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
- ಮತ್ತೊಂದೆಡೆ, ಈ ಹಿಂದಿನ ಆದೇಶಗಳೇ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.




- Advertisement -