Sunday, June 29, 2025
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಪ್ರೌಢಶಾಲೆ ಆರಂಭ ಆಗಸ್ಟ್ 28ರವರೆಗೆ ತಾತ್ಕಾಲಿಕ ಮುಂದೂಡಿಕೆ

- Advertisement -
- Advertisement -

ಮಂಗಳೂರು: 2021-22ನೇ ಶೈಕ್ಷಣಿಕ ವರ್ಷದ 9 ಮತ್ತು 10ನೇ ತರಗತಿಗಳ ಭೌತಿಕ ತರಗತಿಗಳನ್ನು ಆಗಸ್ಟ್ 23 ರಿಂದ ಪ್ರತಿ ದಿನ ಬೆಳಿಗ್ಗೆ ನಡೆಸಲು ಸೂಚಿಸಲಾಗಿದೆ. ಆದರೆ, ದ.ಕ. ಜಿಲ್ಲೆಯಲ್ಲಿ ಆಗಸ್ಟ್ 28ರವರೆಗೆ ಭೌತಿಕ ತರಗತಿಗಳು ಆರಂಭವಾಗುವುದಿಲ್ಲ.

ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ.2 ಕ್ಕಿಂತ ಹೆಚ್ಚಿರುವುದರಿಂದ ಜಿಲ್ಲಾಧಿಕಾರಿಗಳ ನಿರ್ದೇಶನದನುಸಾರ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗೆ ಅನ್ವಯವಾಗುವಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸುವುದನ್ನು ಆಗಸ್ಟ್ 28 ರವರೆಗೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಶಿಕ್ಷಕರು ಆನ್‍ಲೈನ್ ಮೂಲಕ ಶೈಕ್ಷಣಿಕ ಚಟುವಟಿಕೆ ನಡೆಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

driving
- Advertisement -

Related news

error: Content is protected !!