Wednesday, October 7, 2026
spot_imgspot_img
spot_imgspot_img

ಕರಾವಳಿಯಲ್ಲಿನ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಗಂಭೀರ ಪರಿಗಣನೆ; ಗೃಹ ಸಚಿವ ಅರಗ ಜ್ಞಾನೇಂದ್ರ

- Advertisement -
- Advertisement -

ಮಂಗಳೂರು: ಕರಾವಳಿಯಲ್ಲಿ ಕೆಲ ವರ್ಷಗಳ ಈಚೆ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ , ಕರಾವಳಿಯಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸುವಂತೆ ಎಂದು ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇನ್ನು ಎನ್.ಐ.ಎ ಕಚೇರಿಯ ಸ್ಥಾಪನೆ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿದ ಅವರು ಕೇಂದ್ರ ಸರ್ಕಾರದ ಜೊತೆ ಮಾತನಾಡಿ ಎನ್.ಐ.ಎ ಕಚೇರಿ ಸ್ಥಾಪಿಸುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.

ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಸಿಲುಕಿರುವ ವಿಚಾರವಾಗಿ, ಕೇಂದ್ರ ಸರ್ಕಾರದಿಂದ ಕರೆತರುವ ವ್ಯವಸ್ಥೆಯಾಗುತ್ತಿದೆ. ರಾಜ್ಯದಿಂದ ನೋಡಲ್ ಆಫೀಸರ್ ನೇಮಕ ಮಾಡಿದ್ದೇವೆ. ಸಿ.ಐ.ಡಿಯಲ್ಲಿ ಕರ್ತವ್ಯದಲ್ಲಿರುವ ಉಮೇಶ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದೇವೆ ಎಂದು ಹೇಳಿದರು.

- Advertisement -

Related news

error: Content is protected !!