Wednesday, October 7, 2026
spot_imgspot_img
spot_imgspot_img

ಉಡುಪಿ: ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ; ಸ್ಥಳದಲ್ಲೇ ಸಾವು

- Advertisement -
- Advertisement -

ಉಡುಪಿ: ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ. ಉಚ್ಚಿಲ ಸಮೀಪದ ಮುಳೂರಿನಲ್ಲಿ ಘಟನೆ ಸಂಭವಿಸಿದೆ. ಮೃತ ಸ್ಕೂಟರ್ ಸವಾರನನ್ನು ಪಡುಬಿದ್ರೆ ನಿವಾಸಿ ಚರಣ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಪಡುಬಿದ್ರೆಯತ್ತ ಸ್ಕೂಟರ್ ಸವಾರಿ ಮಾಡಿಕೊಂಡು ಹೋಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರಿನ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಲಾದ ಲಾರಿಯ ಹಿಂಬದಿಗೆ ಢಿಕ್ಕಿಯಾಗಿದೆ. ಪರಿಣಾಮ ಸ್ಕೂಟರ್ ಲಾರಿಯ ಅಡಿಯಲ್ಲಿ ಸಿಲುಕಿದೆ. ಘಟನೆಯಿಂದ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಸವಾರ ಅದಾಗಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!