Saturday, August 8, 2026
spot_imgspot_img
spot_imgspot_img

ಸೆ. 15ರ ಒಳಗೆ ಸರ್ಕಾರಿ ಶಾಲೆಗಳಿಗೆ ಪಠ್ಯ ಪುಸ್ತಕ ಪೂರೈಕೆ; ಸಚಿವ ಬಿ.ಸಿ ನಾಗೇಶ್

- Advertisement -
- Advertisement -

ಬೆಂಗಳೂರು : 2021 ಸೆಪ್ಟೆಂಬರ್ 15ರ ಒಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಕೆ ಮಾಡುವ ಗುರಿ ಹೊಂದಲಾಗಿದೆ. ಈಗಾಗಲೇ ಶೇ.70ಕ್ಕಿಂತ ಹೆಚ್ಚು ಪಠ್ಯ ಪುಸ್ತಕಗಳು ಮುದ್ರಣಗೊಂಡಿವೆ. ಮುಂದಿನ ಒಂದು ವಾರದೊಳಗೆ ಮುದ್ರಣಗೊಂಡಿರುವ ಎಲ್ಲ ಪುಸ್ತಕಗಳು ಶಾಲೆಗಳಿಗೆ ತಲುಪುವಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ವಿಧಾನ ಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ‘ಕೋವಿಡ್-19 ಕಾರಣದಿಂದ ಸರಕಾರಿ ಮುದ್ರಣಾಲಯಗಳು ಕೆಲ ಅವಧಿಗೆ ಮುದ್ರಣ ಸ್ಥಗಿತಗೊಳಿಸಿದ್ದವು. ಹೀಗಾಗಿ, ಮುದ್ರಣ ಪ್ರಕ್ರಿಯೆ ವಿಳಂಬವಾಗಿದೆ. ಆದರೂ, ಶಾಲೆ ಆರಂಭಕ್ಕೆ ಮೊದಲೇ ಶೇ.50 ರಷ್ಟು ಪಠ್ಯ ಪುಸ್ತಕಗಳು ಶಾಲೆಗಳನ್ನು ತಲುಪಬೇಕು ಎಂಬ ಗುರಿ ಹೊಂದಲಾಗಿತ್ತು. ಅದರಂತೆ ರಾಜ್ಯದ ಶೇ.50ಕ್ಕಿಂತ ಹೆಚ್ಚು ಶಾಲೆಗಳಿಗೆ ಪುಸ್ತಕಗಳನ್ನು ಪೂರೈಸಲಾಗಿದೆ’ ಎಂದು ತಿಳಿಸಿದರು.

- Advertisement -

Related news

error: Content is protected !!