- Advertisement -
- Advertisement -


ಮಂಗಳೂರು: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತಕ್ಕೆ ಸಂಬಂಧಿಸಿದ0ತೆ ಎರಡೂ ತಂಡಗಳ ನಡುವೆ ಗುರುವಾರ ರಾತ್ರಿ ವಾಗ್ವಾದ ನಡೆದಿದ್ದು, ಈ ವೇಳೆ ಕಾವೂರು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಗುಂಪು ಚದುರಿಸಿದ ಘಟನೆ ನಡೆದಿದೆ.

ಇದನ್ನೂ ಓದಿ: ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದ ಕಾರು!
ಮಂಗಳೂರಿನ ಕಾವೂರು ಜಂಕ್ಷನ್ ಸಮೀಪ ದೈವಸ್ಥಾನದ ಬಳಿ ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಈ ಮಧ್ಯೆ, ಎರಡೂ ತಂಡಗಳ ನಡುವೆ ಮಾತಿನ ಚಕಮಕಿ ಏರ್ಪಟ್ಟು, ತೀವ್ರ ವಾಗ್ವಾದಕ್ಕೆ ಕಾರಣವಾಗಿ ಎರಡೂ ಗುಂಪುಗಳು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಮಧ್ಯೆ ಪ್ರವೇಶಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು. ಇದರಿಂದ ಗುಂಪುಗೂಡಿದ್ದ ತಂಡಗಳು ಚದುರಿದವು. ಎರಡೂ ತಂಡಗಳ ಯುವಕರು ಕಾವೂರು ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.




- Advertisement -








