Wednesday, July 1, 2026
spot_imgspot_img
spot_imgspot_img

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ!

- Advertisement -
- Advertisement -
driving

ಕೊಣನೂರು: ಆಟೊ ಚಾಲಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ಜಗದೀಶ್ (45) ಎನ್ನಲಾಗಿದೆ.

ರಾಮನಾಥಪುರ ಹೋಬಳಿಯ ಮಲ್ಲಾಪುರ ಲಕ್ಕೂರು ನಡುವಿನ ಅರಣ್ಯ ಪ್ರದೇಶದಲ್ಲಿ ಶವವನ್ನು ಕಂಡು ಸ್ಥಳೀಯರು ಕೊಣನೂರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ದುಷ್ಕರ್ಮಿಗಳು ಆಟೊ ಚಾಲಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದಲ್ಲದೇ ಮೃತದೇಹವನ್ನು ಅರಣ್ಯ ಪ್ರದೇಶದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಘಟನೆ ಬಗ್ಗೆ ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!