- Advertisement -
- Advertisement -

ಮಂಗಳೂರು: ಸ್ಕೇಟಿಂಗ್ ಬೋರ್ಡ್ ಮತ್ತು ಅದರ ಚಕ್ರಕ್ಕೆ ಸಂಪರ್ಕ ಕಲ್ಪಿಸುವ ರಾಡ್ ಒಳಗೆ ಅಡಗಿಸಿಟ್ಟು ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ ಆರೋಪದಲ್ಲಿ ಓರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ನಡೆದಿದೆ.
ಕಾಸರಗೋಡು ಮುಳಿಯಾರ್ ನಿವಾಸಿ ಮುಹಮ್ಮದ್ ನವಾಝ್ ಎಂಬಾತನನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮುಹಮ್ಮದ್ ನವಾಝ್ ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಿಂದ ಬಂದಿಳಿದಿದ್ದು, ತಪಾಸಣೆ ವೇಳೆ ಈತ ತೆರಿಗೆ ವಂಚಿಸಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿ ಆರೋಪಿಯನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇನ್ನು ಆರೋಪಿಯಿಂದ 16,21,400 ರೂ. ಮೌಲ್ಯದ 335 ಗ್ರಾಂ ಚಿನ್ನವನ್ನು ವಶಪಡೆಯಲಾಗಿದ್ದು, ಈತ ಚಿನ್ನವನ್ನು ಸ್ಕೇಟಿಂಗ್ ಬೋರ್ಡ್ ಮತ್ತು ಅದರ ಚಕ್ರಕ್ಕೆ ಸಂಪರ್ಕ ಕಲ್ಪಿಸುವ ರಾಡ್ ಒಳಗೆ ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ.





- Advertisement -








