Tuesday, June 30, 2026
spot_imgspot_img
spot_imgspot_img

ಅಪ್ರಾಪ್ತೆಯ ಅತ್ಯಾಚಾರದ ಆರೋಪಿ ಪೊಲೀಸ್ ಠಾಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ವಿಜಯಪುರ: ಅಪ್ರಾಪ್ತೆಯನ್ನು ಅತ್ಯಾಚಾರಗೈದು ಬಂಧಿತನಾಗಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಆರೋಪಿಯು ಸಿಂದಗಿ ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಎಂಬ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಪ್ರಕರಣದ ಆರೋಪಿ ದೇವಿಂದ್ರ ಭೀಮರಾಯ ಸಂಗೋಗಿ ಪೊಲೀಸ್ ಠಾಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಹಿನ್ನೆಲೆಯಲ್ಲಿ ಆಕೆಯ ತಂದೆ ನೀಡಿದ ದೂರಿನನ್ವಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಭಾನುವಾರ ಬೆಳಿಗ್ಗೆ ಠಾಣೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡಿದ್ದನು. ಇದನ್ನು ಗಮನಿಸಿದ ಪೋಲೀಸರು ಕೂಡಲೇ ವಿಜಯಪುರ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಅಸುನೀಗಿದ್ದಾನೆ. ಮೃತ ವ್ಯಕ್ತಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಮತ್ತು ತಾಯಿ ಇದ್ದಾರೆ.

ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಸಾವು
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ್, ಪೊಲೀಸರ ಕಿರುಕುಳದಿಂದ ಆರೋಪಿ ಮೃತಪಟ್ಟಿಲ್ಲ, ನೇಣು ಹಾಕಿಕೊಂಡಿದ್ದ ಕಾರಣ ಆರೋಪಿ ಮೃತಪಟ್ಟಿದ್ದಾನೆ ಎಂದು ಸ್ಪಷ್ಟಪಡಿಸಿದರು. ಪೊಲೀಸ್ ಠಾಣೆಯಲ್ಲಿ ನೇಣು ಹಾಕಿಕೊಂಡು ಸಾವಿಗೀಡಾದ ಇಂಥ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ. ಈ ಘಟನೆ ಕುರಿತು ಸಿಐಡಿ ತನಿಖೆಗೆ ವಹಿಸುವಂತೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದರು.

ಮೃತನ ಪೋಷಕರು ಹಾಗೂ ಸಂಬಂಧಿಕರು ಪೊಲೀಸ್ ಠಾಣೆ ಎದುರಿಗೆ ಪ್ರತಿಭಟನೆ ನಡೆಸಿ, ಆರೋಪಿ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿದ್ದಾರೆ.

- Advertisement -

Related news

error: Content is protected !!