- Advertisement -
- Advertisement -
ಬೆಂಗಳೂರು: ಚಿತ್ರರಂಗದ ಜೊತೆ ನಂಟು ಹೊಂದಿರುವ ಡ್ರಗ್ಸ್ ದಂಧೆಯ ಜಾಲ ದೊಡ್ಡದಾಗಿದೆ. ತನಿಖೆ ನಡೆಸಿದಂತೆಲ್ಲ ಹೊಸ ಹೊಸ ಸೆಲೆಬ್ರಿಟಿಗಳ ಹೆಸರುಗಳು ಹೊರಬರುತ್ತಿವೆ. ಸೋಮವಾರ (ಆ.30) ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಗೋವಿಂದಪುರ ಡ್ರಗ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ಮಾಡಲಾಗಿದೆ. ನಟಿ ಸೋನಿಯಾ ಅಗರ್ವಾಲ್, ಡಿಜೆ ವಚನ್ ಚಿನ್ನಪ್ಪ, ಉದ್ಯಮಿ ಭರತ್ ಮುಂತಾದವರ ಮನೆಯ ಮೇಲೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ಮಾಡಿದ್ದಾರೆ.
ಡ್ರಗ್ ಪೆಡ್ಲರ್ ಥಾಮಸ್ ಈ ಹಿಂದೆ ನೀಡಿದ್ದ ಮಾಹಿತಿಯನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ಮಾಡುತ್ತಿದ್ದಾರೆ. ರಾಜಾಜಿನಗರ, ಪದ್ಮನಾಭನಗರ, ಬೆನ್ಸೆನ್ ಟೌನ್ ಮುಂತಾದ ಕಡೆ ಇರುವ ಸೆಲೆಬ್ರಿಟಿಗಳ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಮಾದಕ ವಸ್ತುಗಳು ಪತ್ತೆ ಆಗಿದ್ದೇ ಹೌದಾದಲ್ಲಿ ಆರೋಪಿಗಳನ್ನು ಬಂಧಿಸುವ ಸಾಧ್ಯತೆ ದಟ್ಟವಾಗಿದೆ.
- Advertisement -