- Advertisement -
- Advertisement -


ನವದೆಹಲಿ: ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್(LPG) ಸಿಲಿಂಡರ್ ಬೆಲೆಯನ್ನು ಬುಧವಾರದಿಂದ ಪ್ರತಿ ಸಿಲಿಂಡರ್‌ಗೆ 25 ರೂ. ಹೆಚ್ಚಳ ಮಾಡಲಾಗಿದೆ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 75 ರೂ.ನಷ್ಟು ಹೆಚ್ಚಿಸಲಾಗಿದೆ. ತುಂಬಿದ 14.2 ಕೆಜಿ ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್(ಎಲ್‌ಪಿಜಿ) ಸಿಲಿಂಡರ್ ಈಗ ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ 884.50 ರೂ.ಆಗಿದೆ.
ಸಬ್ಸಿಡಿ ರಹಿತ ಎಲ್.ಪಿ.ಜಿ. ಸಿಲಿಂಡರ್ ಬೆಲೆಯನ್ನು ಆಗಸ್ಟ್ 17 ರಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್ ಗೆ 25 ರೂಪಾಯಿ ಹೆಚ್ಚಿಸಲಾಗಿತ್ತು. ಈ ಹಿಂದೆ ಜುಲೈ 1 ರಂದು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ 25 ರೂ. ಜಾಸ್ತಿಯಾಗಿದೆ.




- Advertisement -