Saturday, July 5, 2025
spot_imgspot_img
spot_imgspot_img

ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಭಟ್ಕಳ ಮೂಲದ ಆರೋಪಿ ಅಂದರ್!

- Advertisement -
- Advertisement -
driving

ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ವಿರೇನ್ ಖನ್ನಾಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಭಟ್ಕಳ ಮೂಲದ ಮೆಸ್ಸಿ ಕಳೆದ ಒಂದು ವರ್ಷದಿಂದ ತಲೆಮರಿಸಿಕೊಂಡಿದ್ದು, ಮೋಸ್ಟ್ ವಾಂಟೆಡ್‌ ಡ್ರಗ್​ ಪೆಡ್ಲರ್ ಎಂಬ ಕುಖ್ಯಾತಿಯನ್ನು ಹೊಂದಿದ್ದನು. ಮೆಸ್ಸಿ ಬಹುಪಾಲು ಸೆಲೆಬ್ರಿಟಿ ಡ್ರಗ್ಸ್ ಪಾರ್ಟಿಯಲ್ಲಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಿದ್ದು, ಸದ್ಯ ಆತನನ್ನು ವಶಕ್ಕೆ ಪಡೆಯಲಾಗಿದೆ.

ಮಾದಕ ವಸ್ತು ಜಾಲದಲ್ಲಿ ತೊಡಗಿಕೊಂಡಿರುವವರನ್ನು ಮಟ್ಟಹಾಕಲು ಬೆಂಗಳೂರು ಪೊಲೀಸರು ಕಾರ್ಯಚರಣೆ ಆರಂಭಿಸಿದ್ದಾರೆ. ಈಗಾಗಲೇ ಸಿಕ್ಕಿಬಿದ್ದಿರುವ ಡ್ರಗ್​ ಪೆಡ್ಲರ್​ಗಳು ನೀಡಿದ ಮಾಹಿತಿ ಆಧರಿಸಿ ಸೋಮವಾರ (ಆ.30) ಬೆಳಗ್ಗೆಯೇ ಕೆಲವರ ಮನೆ ಮೇಲೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿದ್ದರು.

ಮಾಡೆಲ್​ ಸೋನಿಯಾ, ಉದ್ಯಮಿ ಭರತ್​ ಹಾಗೂ ಡಿಜೆ ವಚನ್​ ಚಿನ್ನಪ್ಪ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಮಾದಕವಸ್ತುಗಳು ಪತ್ತೆ ಆಗಿದ್ದವು. ಹಾಗಾಗಿ ಭರತ್​ ಹಾಗೂ ವಚನ್​ ಚಿನ್ನಪ್ಪ ಅವರನ್ನು ಬಂಧಿಸಲಾಗಿತ್ತು.

ಸೋನಿಯಾ ನಿವಾಸದಲ್ಲಿ ಪೊಲೀಸರಿಗೆ 40 ಗ್ರಾಂ ಗಾಂಜಾ ಪತ್ತೆ ಆಗಿತ್ತು. ಬೆಂಗಳೂರಿನ ರಾಜಾಜಿನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಸೋನಿಯಾ ಇರಲಿಲ್ಲ. ನಾಪತ್ತೆ ಆಗಿದ್ದ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದರು.

ದಾಳಿಯ ಸುಳಿವು ಸಿಗುತ್ತಿದ್ದಂತೆಯೇ ಸೋನಿಯಾ ಬೆಂಗಳೂರಿನ ಖಾಸಗಿ ಹೋಟೆಲ್​ಗೆ ತೆರಳಿದ್ದರು. ಪೊಲೀಸರ ಕಣ್ಣಿಗೆ ಮಣ್ಣೆರೆಚಲು ಅವರು ಪುರುಷರ ಶೌಚಾಲಯಕ್ಕೆ ತೆರಳಿ ಅಡಗಿಕೊಂಡಿದ್ದರು. ಅಂತಿಮವಾಗಿ ಮಹಿಳಾ ಕಾನ್ಸ್​ಟೇಬಲ್​ ಸಹಾಯದಿಂದ ಅವರನ್ನು ಹೊರಗೆ ಕರೆತರಲಾಯಿತು.

- Advertisement -

Related news

error: Content is protected !!