Tuesday, June 30, 2026
spot_imgspot_img
spot_imgspot_img

ಮದ್ಯ ಕುಡಿಸಿ ಯುವತಿ ಮೇಲೆ ಅತ್ಯಾಚಾರ ಆರೋಪ; ಇಬ್ಬರು ನೈಜೀರಿಯನ್ ಪ್ರಜೆಗಳು ಅರೆಸ್ಟ್

- Advertisement -
- Advertisement -

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ವಿದೇಶಿಗರ ಆಟಾಟೋಪ ಮಿತಿಮೀರಿದೆ. ಅಪರಾಧಗಳ ಮೇಲೆ ಅಪರಾಧಗಳನ್ನು ಮಾಡುತ್ತಿದ್ದಾರೆ. ಇಬ್ಬರು ನೈಜೀರಿಯಾ ಪ್ರಜೆಗಳು ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಇಬ್ಬರು ನೈಜೀರಿಯಾ ಪ್ರಜೆಗಳನ್ನ ಪೊಲೀಸರು ಬಂಧಿಸಿದ್ದಾರೆ.

ಬಾಣಸವಾಡಿ ಪೊಲೀಸರು ಇಬ್ಬರು ಅತ್ಯಾಚಾರ ಆರೋಪಿಗಳಾದ ಆ್ಯಂಟೋನಿ (35) ಮತ್ತು ಒಬಾಕಾನನ್ನು (36) ಸೆರೆ ಹಿಡಿದಿದ್ದಾರೆ. ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟವೇರ್ ಉದ್ಯೋಗಿಯಾಗಿರುವ 29 ವರ್ಷದ ಸಂತ್ರಸ್ತ ಯುವತಿಗೆ ಆರೋಪಿ ಆ್ಯಂಟೋನಿ ಹಲವು ವರ್ಷಗಳಿಂದ ಪರಿಚಯವಿದ್ದ. ಕಳೆದ ಭಾನುವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಯುವತಿಗೆ ಪರಿಚಯವಿದ್ದ ಆರೋಪಿ ಆ್ಯಂಟೋನಿ ಆಗಸ್ಟ್​ 29ರಂದು ಯುವತಿಯನ್ನು ಸ್ನೇಹಿತರ ಮನೆಗೆಂದು ಕರೆದೊಯ್ದಿದ್ದ. ಬಳಿಕ ಮೂವರೂ ಜೊತೆಗೆ ಕುಳಿತು ಮದ್ಯ ಸೇವಿಸಿದ್ದರು. ಕುಡಿದ ಮತ್ತಿನಲ್ಲಿದ್ದಾಗ ಅತ್ಯಾಚಾರ ಮಾಡಿದ್ದಾಗಿ ಯುವತಿ ಆರೋಪ ಮಾಡಿದ್ದಾಳೆ. ಈ ಸಂಬಂಧ ಬಾಣಸವಾಡಿ ಪೊಲೀಸ್​ ಠಾಣೆಗೆ ಯುವತಿ ದೂರು ನೀಡಿದ್ದರು. ಯುವತಿಯ ದೂರಿನ ಮೇರೆಗೆ ಇಬ್ಬರನ್ನೂ ಬಂಧಿಸಲಾಗಿದೆ. ಯುವತಿಯನ್ನು ಬಾಣಸವಾಡಿ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

driving
- Advertisement -

Related news

error: Content is protected !!