Tuesday, September 1, 2026
spot_imgspot_img
spot_imgspot_img

ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ಬಗ್ಗೆ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ.!

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯಿಸಿದ್ದು, ಸರ್ಕಾರ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್ ಗಣೇಶ ಹಬ್ಬ ಆಚರಣೆ ಭಾವನಾತ್ಮಕವಾದುದು. ಆದರೆ, ನೆರೆಯ ಕೇರಳದಲ್ಲಿ ಓಣಂ, ಮೊಹರಂನಿ0ದ ಕೋವಿಡ್ ಹತೋಟಿ ತಪ್ಪಿದೆ. ಆ ರೀತಿ ರಾಜ್ಯದಲ್ಲಿ ಹಳಿ ತಪ್ಪಬಾರದು ಎಂಬುದು ಸರಕಾರದ ಉದ್ದೇಶ. ಅಂತಿಮವಾಗಿ ಸರಕಾರ ಎಲ್ಲಅಂಶಗಳನ್ನು ಗಮನದಲ್ಲಿರಿಸಿ ತೀರ್ಮಾನ ಕೈಗೊಳ್ಳಲಿದೆ.

ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಇಡೀ ರಾಜ್ಯಾದ್ಯಂತ ಭಾರೀ ಕೂಗು ಕೇಳಿಬರುತ್ತಿದೆ. ಸರಕಾರವನ್ನು ಜನರು ಮನವಿ ಮಾಡುತ್ತಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಶೀಘ್ರದಲ್ಲೇ ಹೊರಬೀಳಲಿದೆ.

- Advertisement -

Related news

error: Content is protected !!