Saturday, June 28, 2025
spot_imgspot_img
spot_imgspot_img

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಕಾಮುಕ ವೃದ್ಧ!

- Advertisement -
- Advertisement -
driving

ತುಮಕೂರು: ಕಾಮುಕ ವೃದ್ಧನೊಬ್ಬ 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಲಿಂಗಣ್ಣ (65) ಎನ್ನಲಾಗಿದೆ.

ಬಾಲಕಿಯು ತನ್ನ ಪೋಷಕರೊಂದಿಗೆ ಹೊಲದಲ್ಲಿದ್ದಳು. ಸಂಜೆಯಾಗುತ್ತಿದ್ದಂತೆ ಮನೆಗೆ ಹೋಗಿ ಟೀ ಮಾಡಿಕೊಂಡು ಬಾ ಎಂದು ಬಾಲಕಿಯನ್ನು ಪೋಷಕರು ಕಳುಹಿಸಿದ್ದರು. ಅದರಂತೆ ಬಾಲಕಿ ಮನೆಗೆ ಹೋಗುವ ಸಂದರ್ಭದಲ್ಲಿ ಆಕೆಯನ್ನು ಹಿಂಬಾಲಿಸಿ, ಬಳಿಕ ಮನೆಗೆ ನುಗ್ಗಿ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಈ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ.

ಘಟನೆ ನಡೆದು ಮೂರು ದಿನಗಳ ನಂತರ ಬಾಲಕಿ ತನ್ನ ಪೋಷಕರಿಗೆ ಈ ಬಗ್ಗೆ ತಿಳಿಸಿದ್ದಾಳೆ. ಆ ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

- Advertisement -

Related news

error: Content is protected !!