Wednesday, June 24, 2026
spot_imgspot_img
spot_imgspot_img

ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿಪಡಿಸಿದ ಪ್ರಕರಣ; ಪುತ್ತೂರು ಪೊಲೀಸರಿಂದ ಮತ್ತೆ ನಾಲ್ವರು ಆರೋಪಿಗಳ ಬಂಧನ

- Advertisement -
- Advertisement -

ಪುತ್ತೂರು: 75ನೇ ವರ್ಷದ ಸ್ವಾತಂತ್ರ್ಯದ ಸಂದರ್ಭದಲ್ಲಿ ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿ ಮತ್ತೆ ನಾಲ್ವರು ಆರೋಪಿಗಳನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕಬಕ ನಿವಾಸಿಗಳಾದ ನೌಶಾದ್, ಮಹಮ್ಮದ್ ಹಾರಿಸ್, ಮಹಮ್ಮದ್ ತೌಸೀಪ್, ಸಂಶುದ್ದೀನ್ ಅವರು ಬಂದಿತ ಆರೋಪಿಗಳು. ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಜಾಮೀನು ಅರ್ಜಿಯನ್ನು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿತ್ತು.

ಇದೀಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವನೆ ಮತ್ತು ಪುತ್ತೂರು ಡಿವೈಎಸ್ಪಿ ಡಾ.ಗಾನ ಪಿ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಗರ ಠಾಣಾ ಪೊಲೀಸ್ ಇನ್‌ಸ್ಪೆಕ್ಟರ್ ಗೋಪಾಲ್ ನಾಯ್ಕ್ ಮತ್ತು ಎಸ್.ಐ ಸುತೇಶ್ ಅವರ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಪಡಿಸಿದ್ದು, ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!