Sunday, June 14, 2026
spot_imgspot_img
spot_imgspot_img

ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ!

- Advertisement -
- Advertisement -

ಶಿವಮೊಗ್ಗ: ಸಾಕುತಂದೆ ಹಾಗು ಪಕ್ಕದ ಮನೆ ಯುವಕನಿಂದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ ಅಮಾನವೀಯ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಗಳು ಸಾಕು ತಂದೆ ಮಂಜುನಾಥ್ ಹಾಗು ಪಕ್ಕದ ಮನೆ ಯುವಕ ರಾಮು ಎನ್ನಲಾಗಿದೆ.

ಮೊದಲ ಪತ್ನಿಯಿಂದ ದೂರವಾಗಿದ್ದ ಮಂಜುನಾಥ್ ಕೂಲಿ ಕೆಲಸ ಮಾಡುತ್ತಿದ್ದು, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾದ ವಿಧವೆಯನ್ನು ಮದುವೆಯಾಗಿದ್ದಾನೆ. ಆಕೆಗೆ ಹೆಣ್ಣು ಮಗುವಿತ್ತು. ಆ ಅಪ್ರಾಪ್ತ ಬಾಲಕಿಯ ಮೇಲೆ ಆರೋಪಿ ಮಂಜುನಾಥ್ ಪತ್ನಿ ಇಲ್ಲದ ಸಂದರ್ಭದಲ್ಲಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳಲು ಶುರು ಮಾಡಿದ್ದನು. ಇದಲ್ಲದೆ ಎದುರು ಮನೆ ಯುವಕ ರಾಮು ಕೂಡ ಬಾಲಕಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ.

ಬಾಲಕಿಯಲ್ಲಾದ ಬದಲಾವಣೆಯನ್ನು ಗಮನಿಸಿದ ಶಿಕ್ಷಕಿಯಿಂದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಕುರಿತು ಆರೋಪಿಗಳ ವಿರುದ್ದ ಪೋಕ್ಸೋ ಕಾಯ್ದೆಯಡಿ ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!