Tuesday, June 30, 2026
spot_imgspot_img
spot_imgspot_img

ಮದುವೆ ಸಂಭ್ರಮದಲ್ಲಿದ್ದ ಮನೆಯಿಂದ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ!

- Advertisement -
- Advertisement -

ಹಾಸನ: ಮದುವೆ ಸಂಭ್ರಮದಲ್ಲಿದ್ದ ಮನೆಗೆ ನುಗ್ಗಿದ ಖದೀಮರು ಬರೋಬ್ಬರಿ 2 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾದ ಘಟನೆ ಹಾಸನ ಹೊರವಲಯದ ರಿಂಗ್ ರೋಡ್ ಸಮೀಪದಲ್ಲಿ ನಡೆದಿದೆ.

ಗ್ರಾನೈಟ್ ಉದ್ಯಮಿ ರಘು ಎಂಬುವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ರಘು ಅವರ ಮನೆಯಲ್ಲಿ ಅಕ್ಟೋಬರ್ ನಲ್ಲಿ ಮದುವೆ ಸಮಾರಂಭ ನಡೆಯಲಿತ್ತು. ಇದಕ್ಕೆಂದು ಬ್ಯಾಂಕಿನಲ್ಲಿ ಇಟ್ಟಿದ್ದ ಒಡವೆಗಳನ್ನು ಬಿಡಿಸಿಕೊಂಡು ಮನೆಗೆ ತಂದಿದ್ದರು. ಜೊತೆಗೆ ರಘು ಅವರು ತಮ್ಮ ಉದ್ದಿಮೆಯ ಹಣವನ್ನು ಕೂಡ ಮದುವೆ ಖರ್ಚಿಗೆಂದು ಮನೆಯಲ್ಲಿ ತಂದಿಟ್ಟಿದ್ದರು. ಆದರೆ ನಿನ್ನೆ ರಾತ್ರಿ ಸಮಯದಲ್ಲಿ ಮನೆಯ ಮುಂಭಾಗ ಮತ್ತು ಹಿಂಭಾಗದ ಬಾಗಿಲನ್ನು ಒಡೆದು ಮನೆಯಲ್ಲಿದ್ದ ಸುಮಾರು 2 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋ ಚಿ ಖದೀಮರು ಪರಾರಿಯಾಗಿದ್ದಾರೆ.

- Advertisement -

Related news

error: Content is protected !!