Tuesday, June 23, 2026
spot_imgspot_img
spot_imgspot_img

ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ; ಮಾಲೀಕನ ವಿರುದ್ಧ FIR!

- Advertisement -
- Advertisement -

ಮಹಾರಾಷ್ಟ್ರ: ಲಾಡ್ಜ್ ವೊಂದರಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಯುತ್ತಿದ್ದು, ಈ ಜಾಲವನ್ನು ಪತ್ತೆ ಹಚ್ಚಿ ಪೊಲೀಸರು ಒಬ್ಬನನ್ನು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಠಾಣೆಯಲ್ಲಿ ನಡೆದಿದೆ.

ಉಲ್ಲಾಸನಗರ ಅಪರಾಧ ವಿಭಾಗದ ಮಾನವ ಕಳ್ಳಸಾಗಣೆ ವಿರೋಧಿ ಘಟಕವು ಖಚಿತ ಮಾಹಿತಿ ಮೇರೆಗೆ ವಿಠಲವಾಡಿ ಪ್ರದೇಶದ ಅಶೋಲೆ ಗ್ರಾಮದಲ್ಲಿರುವ ವಸತಿಗೃಹವೊಂದರ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಪೊಲೀಸರು ಲಾಡ್ಜ್‌ ಮಾಲೀಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಐವರು ಮಹಿಳೆಯರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಲಾಡ್ಜ್‌ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!