Wednesday, July 29, 2026
spot_imgspot_img
spot_imgspot_img

ಬ್ಲಾಕ್ ಮೇಲ್ ಮಾಡಿ ಅಪ್ರಾಪ್ತ ಬಾಲಕಿಯ ನಿರಂತರ ಅತ್ಯಾಚಾರ!

- Advertisement -
- Advertisement -
driving

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಬಟ್ಟೆ ಬದಲಿಸುತ್ತಿದ್ದ ವಿಡಿಯೋ ಚಿತ್ರೀಕರಿಸಿಕೊಂಡು, ಆಕೆಗೆ ಬ್ಲಾಕ್ ಮೇಲ್ ಮಾಡಿ ಹೆದರಿಸಿ ಕಾಮುಕರು ನಿರಂತರ ಅತ್ಯಾಚಾರ ಮಾಡುತ್ತಿದ್ದ ಅಮಾನುಷ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯ ಪಟ್ಟಣದಲ್ಲಿ ನಡೆದಿದೆ.

ಕಳೆದ ಎರಡು ತಿಂಗಳಿಂದ ಬಾಲಕಿಯನ್ನು ಹೆದರಿಸಿ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು ಎನ್ನಲಾಗಿದೆ. ವಿಡಿಯೋ ಚಿತ್ರೀಕರಿಸಿಕೊಂಡು, ಕರೆದಾಗ ಬರಬೇಕು ಇಲ್ಲವಾದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಡುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಬಾಲಕಿಗೆ ಬೆದರಿಸಿ ಪದೇ ಪದೇ ಅತ್ಯಾಚಾರವೆಸಗಿದ್ದಾರೆ.

ಪಾಪಿಗಳ ಹೇಯ ಕೃತ್ಯಕ್ಕೆ ಗ್ರಾಮಸ್ಥನೋರ್ವ ಸಾಥ್ ನೀಡಿದ್ದಾನೆ. ಬಾಲಕಿಗೆ ರಸ್ತೆಯಲ್ಲಿ ಹೋಗುವಾಗಲೂ ಕಾಮುಕರು ಕಿರುಕುಳ ನೀಡಲು ಆರಂಭಿಸಿದ್ದಾರೆ. ನೊಂದ ಬಾಲಕಿ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾಳೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇನ್ನಿಬ್ಬರಿಗಾಗಿ ಶೋಧ ನಡೆಸಿದ್ದಾರೆ.

- Advertisement -

Related news

error: Content is protected !!