

ಮಂಗಳೂರು: ಮೈಸೂರು ದೇಗುಲ ಧ್ವಂಸ ಪ್ರಕರಣಕ್ಕೆ ಸಂ ಬಂಧ ಪಟ್ಟಂತೆ ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಪ್ರಧಾನ್ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಗಾಂಧೀಜಿ ಹತ್ಯೆ ಕುರಿತಂತೆ ಹೇಳಿಕೆ ನೀಡಿದ್ದರು. ಈ ಕುರಿತಂತೆ ಧರ್ಮೇಂದ್ರ ಪ್ರಧಾನ್ ತಮ್ಮ ಹೇಳಿಕೆಗೆ ಸಂಬAಧಿಸಿ ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನ ನಂಜನಗೂಡಿನ ಹುಚ್ಚುಗಣಿ ಗ್ರಾಮದ ಮಹಾದೇವಮ್ಮನ ದೇವಸ್ಥಾನ ಧ್ವಂಸ ಪ್ರಕರಣದ ಕುರಿತು, ಸುದ್ದಿಗೋಷ್ಠಿ ನಡೆಸಿ ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಬಿಟ್ಟಿಲ್ಲ. ಇನ್ನು ನಿವೇಲ್ಲಾ ಯಾವ ಲೆಕ್ಕ ಎಂದು ಹೇಳಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಮತ್ತು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದಂತೆಯೇ ಧರ್ಮೇಂದ್ರ ತನ್ನ ಹೇಳಿಕೆಯ ಬಗ್ಗೆ ಕ್ಷಮೆಯಾಚನೆ ಮಾಡಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಧರ್ಮೇಂದ್ರ, ಹಿಂದೂವಾಗಿ ನಮ್ಮ ಶ್ರದ್ಧೆಯ ಕೇಂದ್ರ ದೇವಸ್ಥಾನ ಧ್ವಂಸವಾದ ಬಗ್ಗೆ ಅಸಹನೆಯಿಂದ ಮಾತನಾಡಿದ್ದೇನೆ. ಇದರ ಹಿಂದೆ ಯಾವುದೇ ಬೆದರಿಕೆ ಹಾಕುವ ದುರುದ್ದೇಶ ಇಲ್ಲ. ಗಾಂಧೀಜಿ ಹತ್ಯೆಯ ಕಾರಣವನ್ನು ವಿವರಿಸುವ ಭರದಲ್ಲಿ ಈ ಹೇಳಿಕೆ ಬಂದಿದೆ. ಈ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದಾರೆ. ಗಾಂಧೀಜಿ ಹತ್ಯೆ ಕುರಿತಂತೆ ಹೇಳಿಕೆಯನ್ನು ಮಾಧ್ಯಮಗಳಲ್ಲಿ ತಿರುಚಲಾಗಿದ್ದು, ಹೇಳಿಕೆಯ ಉದ್ದೇಶವನ್ನು ಬೇರೆ ರೀತಿಯಲ್ಲಿ ತೋರಿಸಲಾಗಿದೆ ಎಂದು ಅವರು ಹೇಳಿದರು.










