Saturday, June 27, 2026
spot_imgspot_img
spot_imgspot_img

ಕಬ್ಬಿನ ಗದ್ದೆಯಲ್ಲಿ ನಗ್ನವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಎರಡು ವರ್ಷದ ಬಾಲಕಿ!

- Advertisement -
- Advertisement -

ಬೆಳಗಾವಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಎರಡು ವರ್ಷದ ಬಾಲಕಿ ಪತ್ತೆಯಾಗಿದ್ದಾಳೆ. ಬೆತ್ತಲೆ ಸ್ಥಿತಿಯಲ್ಲಿದ್ದ ಬಾಲಕಿಯ ಮೈಮೇಲೆ ಸಿಗರೇಟ್ ನಿಂದ ಸುಟ್ಟ ಗಾಯಗೊಳಿಸಲಾಗಿದೆ.

ಮಗುವಿನ ಮೈತುಂಬ ಸುಟ್ಟ ಗಾಯಗಳಾಗಿದ್ದು, ಬಾಲಕಿ ಎರಡು ದಿನಗಳ ಕಾಲ ಗದ್ದೆಯಲ್ಲಿ ನರಳಾಡಿದ್ದಾಳೆ. ನರಳಾಟದ ಸದ್ದು ಕೇಳಿ ಕಬ್ಬಿನ ಗದ್ದೆಯಲ್ಲಿ ಹುಡುಕಾಡಿದ ಗ್ರಾಮಸ್ಥರು ಅಮಾನವೀಯ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ.

ಬಾಲಕಿಯನ್ನು ರಕ್ಷಿಸಿ ಅಥಣಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಗುರುತು ಪತ್ತೆಯಾಗಿಲ್ಲ. ಆಕೆಗೆ ಚಿತ್ರಹಿಂಸೆ ನೀಡಲಾಗಿದೆ. ವಾಮಾಚಾರದ ಶಂಕೆ ವ್ಯಕ್ತವಾಗಿದೆ. ಮಗುವಿನ ಪೋಷಕರು ಯಾರೆಂಬುದು ಗೊತ್ತಾಗಿಲ್ಲ.

ಸ್ಥಳಕ್ಕೆ ಡಿವೈಎಸ್ಪಿ ಎಸ್. ಗಿರೀಶ್, ಸಿಪಿಐ ಶಂಕರಗೌಡ ಬಸನಗೌಡರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಥಣಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!