Tuesday, July 1, 2025
spot_imgspot_img
spot_imgspot_img

ಮಂಗಳೂರು: ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದವರೆಗೂ ಮಹಿಳಾ ಮತ್ತು ಮಕ್ಕಳ ಸುರಕ್ಷತಾ ಸಮಿತಿ ರಚನೆಗೆ ಜಯಕರ್ನಾಟಕ ಜನಪರ ವೇದಿಕೆ ಮನವಿ

- Advertisement -
- Advertisement -

ಮಂಗಳೂರು: “ಹೆಣ್ಣುಮಕ್ಕಳ ಸುರಕ್ಷತೆಯ ಮತ್ತು ಕಾಳಜಿ ವಹಿಸಿ ಮಹಿಳಾ ಮತ್ತು ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ” ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದವರೆಗೂ ಮಹಿಳಾ ಮತ್ತು ಮಕ್ಕಳ ಸುರಕ್ಷತಾ ಸಮಿತಿಗಳನ್ನು ರಚಿಸಲು ಜಯಕರ್ನಾಟಕ ಜನಪರ ವೇದಿಕೆಯ ಜಿಲ್ಲೆಯ ವಿವಿಧ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.

ಜಯ ಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿಯವರ ನೇತೃತ್ವದಲ್ಲಿ, ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ ಹಾಗೂ ರಾಜ್ಯ ಕಾರ್ಯಾಧ್ಯಕ್ಷ ಅಣ್ಣಪ್ಪ ಓಲೇಕಾರ ಅವರ ಮಾರ್ಗದರ್ಶನದಲ್ಲಿ ಮನವಿಯನ್ನು ಸಲ್ಲಿಸಿದರು

ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದವರೆಗೂ ಮಹಿಳಾ ಮತ್ತು ಮಕ್ಕಳ ಸುರಕ್ಷತಾ ಸಮಿತಿಗಳನ್ನು ರಚಿಸಿ ತಪ್ಪಿತಸ್ಥರಿಗೆ ಕಠಿಣ ಕಾನೂನು ಜಾರಿಗೊಳಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮತ್ತು ಮಂಗಳೂರು ಕಮಿಷನರ್ ರವರಿಗೆ ಜಯಕರ್ನಾಟಕ ಜನಪರ ವೇದಿಕೆಯು ಒತ್ತಾಯದ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕ ರಾಮದಾಸ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಬ್ರಿಜೇಶ್ ನಾಯರ್, ಪ್ರವೀಣ್ ಶೆಟ್ಟಿ ತಿಂಗಳಾಡಿ, ರಘುನಾಥ್ ವಿಟ್ಲ, ಗುಣಪಾಲ ದಾಸ್ ಮತ್ತು ತೌಫೀಕ್ ಇನ್ನಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!