Wednesday, September 2, 2026
spot_imgspot_img
spot_imgspot_img

ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಎಎಸ್‌ಐ!

- Advertisement -
- Advertisement -
driving

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪೊಲೀಸ್ ಠಾಣೆಯ ಎಎಸ್‌ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಂಡಿನಕುರುಬರಹಟ್ಟಿ ಗ್ರಾಮದ ಬಳಿ ಭಾನುವಾರ ಸಂಭವಿಸಿದೆ. ಮೃತ ವ್ಯಕ್ತಿ ಎಎಸ್‌ಐ ಗುರುಮೂರ್ತಿ (50) ಎನ್ನಲಾಗಿದೆ.

ಗುರುಮೂರ್ತಿ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಹಿರಿಯೂರು ತಾಲ್ಲೂಕಿನ ಐಮಂಗಲದಲ್ಲಿ ಐಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇತ್ತೀಚಿಗೆ ಎಎಸ್‌ಐ ಆಗಿ ಬಡ್ತಿ ಪಡೆದಿದ್ದರು.

ಮಹಿಳೆಯ ಜೊತೆ ಅಕ್ರಮ ಸಂಬಂಧದ ವಿಚಾರದ ಪತ್ನಿಯ ಜೊತೆ ಶನಿವಾರ ಮನೆಯಲ್ಲಿ ಜಗಳವಾಡಿದ್ದರು ಎಂದು ತಿಳಿದುಬಂದಿದೆ. ಬಳಿಕ ಕರ್ತವ್ಯಕ್ಕೂ ಹಾಜರಾಗಿರಲಿಲ್ಲ. ಭಾನುವಾರದಂದು ಚಿತ್ರದುರ್ಗ ತಾಲ್ಲೂಕಿನ ದಂಡಿನ ಕುರುಬರಹಟ್ಟಿ ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!