Saturday, June 28, 2025
spot_imgspot_img
spot_imgspot_img

ರಾಜ್ಯದಲ್ಲಿ ಅ.13ರವರೆಗೆ ಭಾರಿ ಮಳೆ; ದಕ್ಷಿಣ ಕನ್ನಡ ಸಹಿತ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.!

- Advertisement -
- Advertisement -

ರಾಜ್ಯದಲ್ಲಿ ಅಕ್ಟೋಬರ್ 13ರವರೆಗೂ ಭಾರಿ ಮಳೆಯಾಗಲಿದ್ದು, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಐದು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಅ.9ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

- Advertisement -

Related news

error: Content is protected !!