Tuesday, September 22, 2026
spot_imgspot_img
spot_imgspot_img

ಉಡುಪಿ: ‘ಪೊಲೀಸರು ಕೇಸರಿ ಬಟ್ಟೆ ಧರಿಸಿದರೆ ನಿಮಗೇನು ಸಮಸ್ಯೆ..?’ – ಸಿದ್ದರಾಮಯ್ಯರನ್ನು ಪ್ರಶ್ನಿಸಿದ ರಘುಪತಿ ಭಟ್

- Advertisement -
- Advertisement -
driving

ಉಡುಪಿ: ದೇಶದಲ್ಲಿ ಕೇಸರಿಯನ್ನು ಹಿಂದಿನಿಂದಲೂ ಪೂಜಿಸಿಕೊಂಡು ಬಂದಿದ್ದೇವೆ, ಕೇಸರಿ ತ್ಯಾಗದ ಸಂಕೇತ. ಪೊಲೀಸರು ಕೇಸರಿ ಬಟ್ಟೆ ಧರಿಸಿದರೆ ನಿಮಗೆ ಏನು ಸಮಸ್ಯೆ? ಎಂದು ಉಡುಪಿ ಶಾಸಕ ರಘುಪತಿ ಭಟ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ರವರನ್ನು ಪ್ರಶ್ನಿಸಿದ್ದಾರೆ.

ಪೊಲೀಸರು ಕೇಸರಿ ಉಡುಪು ಧರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸರ ಕೈಗೆ ತ್ರಿಶೂಲ ಕೊಟ್ಟುಬಿಡಿ ಎಂಬ ಸಿದ್ದರಾಮಯ್ಯ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ರಘುಪತಿ ಭಟ್, “ನಿಮಗೆ ಕೇಸರಿ ಕಂಡರೆ ಯಾಕೆ ಅಷ್ಟು ಭಯ? ಟಿಪ್ಪುವಿನ ಪೋಷಾಕು ಧರಿಸಿ, ಖಡ್ಗ ಹಿಡಿದಿಲ್ಲವೇ? ಪಚ್ಚೆ ಶಾಲು,ಟೊಪ್ಪಿ ಧರಿಸಿದಾಗ ಭಾವೈಕ್ಯತೆ ನೆನಪಾಗಲಿಲ್ಲವೇ? ಪೊಲೀಸರು ಕೇಸರಿ ಬಟ್ಟೆ ಧರಿಸಿದರೆ ನಿಮಗೆ ಏನು ಸಮಸ್ಯೆ?” ಎಂದು ಪ್ರಶ್ನಿಸಿದ್ದಾರೆ.

“ದೇಶದಲ್ಲಿ ಕೇಸರಿಯನ್ನು ಹಿಂದಿನಿಂದಲೂ ಪೂಜಿಸಿಕೊಂಡು ಬಂದಿದ್ದೇವೆ. ಅಲ್ಪಸಂಖ್ಯಾತರ ಮತಬ್ಯಾಂಕ್ ಉದ್ದೇಶವಿಟ್ಟುಕೊಂಡು ಕೇಸರಿಯನ್ನು ದ್ವೇಷಿಸಿದ್ದೀರಿ. ಕೇಸರಿಯನ್ನು ದ್ವೇಷಿಸಿದಕ್ಕೆ ಕಾಂಗ್ರೆಸ್‌ಗೆ ಈ ಪರಿಸ್ಥಿತಿ ಬಂದಿದೆ. ಕೇಸರಿಯನ್ನು ವಿರೋಧಿಸಿದರೆ ಇನ್ನಷ್ಟು ಮೂಲೆ ಗುಂಪಾಗುತ್ತೀರಿ” ಎಂದರು.

ಇನ್ನು ಹಬ್ಬದ ದಿನ ಪೊಲೀಸರು ಕೇಸರಿ ಧರಿಸಿದ್ದನ್ನು ಸಮರ್ಥಿಸುತ್ತೇನೆ. ನಮ್ಮ ರಾಷ್ಟ್ರ ಧ್ವಜದಲ್ಲಿ ಕೇಸರಿ ಬಣ್ಣ ಇದೆ. ಕೇಸರಿ ಧರಿಸಿದ್ದು ಅಪರಾಧವೇನಲ್ಲ. ಸಿದ್ದರಾಮಯ್ಯ ಮಾನಸಿಕತೆ ಈ ಟ್ವೀಟ್‌ನಿಂದ ಗೊತ್ತಾಗುತ್ತೆ. ಪೊಲೀಸರಿಗೆ ತ್ರಿಶೂಲ ಕೊಡಿ ಎಂದು ಟೀಕಿಸಿದ್ದ ಸಿದ್ದರಾಮಯ್ಯ. ತ್ರಿಶೂಲ ಯಾರನ್ನೂ ಕೊಲ್ಲುವ ಆಯುಧ ವಲ್ಲ. ತ್ರಿಶೂಲ ಹಿಂದೂಗಳು ಆರಾಧಿಸುವ ಆಯುಧ” ಎಂದು ಹೇಳಿದ್ದಾರೆ.

ಪೊಲೀಸರು ಹಬ್ಬದ ದಿನ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದಾರೆ. ಅವರು ಕೇಸರಿ ಬಣ್ಣದ ಬಟ್ಟೆ ಧರಿಸಿದರೆ ತಪ್ಪೇನು?

ನೀವು ಟಿಪ್ಪು ಜಯಂತಿಯಲ್ಲಿ ಟೋಪಿ ಹಾಕೊಂಡು ಖಡ್ಗವನ್ನು ಹಿಡಿಯುತ್ತೀರಿ. ಮಸೀದಿಗೆ ಹೋದಾಗ ಅವರ ಟೋಪಿ ಧರಿಸುತ್ತೀರೀ. ಅದು ಮಾತ್ರ ಭಾವೈಕ್ಯತೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ತಾವು ಎಲ್ಲರನ್ನೂ ಸಮಾನವಾಗಿ ನೋಡಬೇಕಾಗಿದೆ.

- Advertisement -

Related news

error: Content is protected !!