Saturday, June 20, 2026
spot_imgspot_img
spot_imgspot_img

ಮಂಗಳೂರು: ಲಾಡ್ಜ್‌ನಲ್ಲಿ ಪಾರ್ಟಿ ವೇಳೆ ಯುವಕನ ಕೊಲೆ ಪ್ರಕರಣ; ನಾಲ್ವರು ಖಾಕಿ ಬಲೆಗೆ!

- Advertisement -
- Advertisement -
driving

ಮಂಗಳೂರು: ಲಾಡ್ಜ್‌ವೊಂದರಲ್ಲಿ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದ ಆರೋಪಿ ಸುರತ್ಕಲ್ ನಿವಾಸಿ ಜೇಸನ್ (25) ಎನ್ನಲಾಗಿದೆ.

ಘಟನೆಯ ವಿವರ:
ಅ.15ರಂದು ಮಂಗಳೂರಿನಲ್ಲಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್,ಪ್ರಜ್ವಲ್ ಎಂಬವರು ತೆರಳಿದ್ದರು.

ರಾತ್ರಿ ಸುಮಾರು 2 ಗಂಟೆಗೆ ಜೇಸನ್ ಸುರತ್ಕಲ್ ಮತ್ತು ಧನುಷ್ ಎಂಬುವರ ಮಧ್ಯೆ ಜಗಳವಾಗಿದ್ದು, ಈ ವೇಳೆ ಜೇಸನ್ ಸುರತ್ಕಲ್ ಎಂಬಾತನು ತನ್ನಲ್ಲಿರುವ ಹರಿತವಾದ ಆಯುಧದಿಂದ ಧನುಷ್ ಗೆ ಚುಚ್ಚಿದ್ದಾನೆ ಎನ್ನಲಾಗಿದೆ. ಇದರಿಂದ ಧನುಷ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ಮೃತಪಟ್ಟಿದ್ದ ಎಂದು ದೂರಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಜೇಸನ್ ಸೇರಿದಂತೆ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದರು. ಇನ್ನೊಬ್ಬ ಆರೋಪಿಗೆ ಶೋಧ ಮುಂದುವರಿದಿದೆ.

- Advertisement -

Related news

error: Content is protected !!