- Advertisement -
- Advertisement -


ಕಡಬ: ಸಾಕು ನಾಯಿ ಮೇಲೆ ಚಿರತೆಯೊಂದು ದಾಳಿ ನಡೆಸಿ ಕೊಂದು ಹಾಕಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಜಾಲು ಎಂಬಲ್ಲಿ ಆದಿತ್ಯವಾರ ರಾತ್ರಿ ನಡೆದಿದೆ.

ನೂಜಿಬಾಳ್ತಿಲ ಗ್ರಾಮದ ಜಾಲು ಆನಂದ ಪೂಜಾರಿ ಎಂಬವರ ಮನೆಯ ಸಾಕು ನಾಯಿ ಹಾಗೂ ಮರಿಗಳು ಆಟವಾಡುತ್ತಿದ್ದ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿದೆ. ಅಲ್ಲದೆ ನಾಯಿ ಮರಿಯನ್ನು ಕೊಂಡೊಯ್ದು ಸಾಯಿಸಿದೆ ಎಂದು ತಿಳಿದುಬಂದಿದೆ.

ಕೆಲ ತಿಂಗಳ ಹಿಂದೆ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ದಂಪತಿ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿತ್ತು, ಬಳಿಕ ಚಿರತೆಯನ್ನು ಸೆರೆ ಹಿಡಿಯಲಾಗಿತ್ತು. ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.



- Advertisement -








