Friday, October 2, 2026
spot_imgspot_img
spot_imgspot_img

ಪುತ್ತೂರು: ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್‌ರವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು!

- Advertisement -
- Advertisement -

ಪುತ್ತೂರು: ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್‌ರವರ ಆರೋಗ್ಯದಲ್ಲಿ ಏರುಪೇರು ಆಗಿರುವ ನಿಟ್ಟಿನಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

`ಬಿಜೆಪಿಯ ಭೀಷ್ಮ’ ಖ್ಯಾತಿಯ ಉರಿಮಜಲು ರಾಮ ಭಟ್ಟರಿಗೆ 92 ವರ್ಷ. ಅವರು ವಯೋ ಸಹಜ ಅನಾರೋಗ್ಯದಲ್ಲಿದ್ದು, ಕೆಲವು ದಿನಗಳ ಹಿಂದೆಯಷ್ಟೇ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚೇತರಿಸಿಕೊಂಡಿದ್ದ ರಾಮ ಭಟ್‌ರವರನ್ನು ಕೊಂಬೆಟ್ಟಿನಲ್ಲಿರುವ ಅವರ ಮನೆಗೆ ಕರೆ ತರಲಾಗಿತ್ತು. ಮತ್ತೆ ಅವರ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಇದೀಗ ಪುತ್ತೂರಿನ ಸುಶ್ರುತ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!