Friday, August 7, 2026
spot_imgspot_img
spot_imgspot_img

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

- Advertisement -
- Advertisement -

ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಮುಂಡ್ಯತ್ತಡ್ಕ ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿ ಮುಂಡ್ಯತ್ತಡ್ಕದ ಜನಾರ್ದನ(34) ಎನ್ನಲಾಗಿದೆ. ಸೋಮವಾರ ಸಂಜೆ ಸಾಮಗ್ರಿಗಳನ್ನು ಖರೀದಿಸಲು ಪೇಟೆಗೆ ತೆರಳಿದ್ದ ಜನಾರ್ದನ ಬಳಿಕ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಶೋಧ ನಡೆಸಿದ್ದರು. ಇಂದು ಬೆಳಗ್ಗೆ ಮನೆಯಿಂದ ಅಲ್ಪ ದೂರದ ಗೇರು ಮರದ ರೆಂಬೆಗೆ ಕುತ್ತಿಗೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಜನಾರ್ದನ ಅವರ ಮೃತದೇಹ ಪತ್ತೆಯಾಗಿದ್ದಾರೆ.

ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

- Advertisement -

Related news

error: Content is protected !!