Friday, June 19, 2026
spot_imgspot_img
spot_imgspot_img

ಸತತ ಹೆಣ್ಣು ಹೆತ್ತಿದ್ದಕ್ಕೆ ಗಂಡನಿಂದ ಮನೆಯಲ್ಲಿ ಕಿರುಕುಳ; 3 ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ

- Advertisement -
- Advertisement -

ಕಲಬುರಗಿ: ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ತಾಯಿಯೊಬ್ಬಳು ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಇದರಲ್ಲಿ ಒಂದು ಮಗುವನ್ನು ರಕ್ಷಿಸಲಾಗಿದೆ.

ಘಟನೆಯಲ್ಲಿ ತಾಯಿ ಲಕ್ಷ್ಮಿ ಏಳಕೆ (28), ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಾವಿಯಲ್ಲಿ ಮುಳುಗುತ್ತಿದ್ದ ಈಶ್ವರಿ (4)ಯನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಮೂವರೂ ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಮನೆಯವರು ಲಕ್ಷ್ಮಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಲಕ್ಷಿ ಏಳಕೆ ಗ್ರಾಮದ ಹೊರವಲಯದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!