Sunday, August 30, 2026
spot_imgspot_img
spot_imgspot_img

ಖೋಟಾ ನೋಟು ದಂಧೆ ನಡೆಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್!

- Advertisement -
- Advertisement -

ಬೆಂಗಳೂರು: ನಕಲಿ ನೋಟು ಜೆರಾಕ್ಸ್ ಮಾಡಿ ವಂಚಿಸುತ್ತಿದ್ದ 7 ಜನರನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ನೋಟು ಬದಲಾವಣೆ ಮಾಡುತ್ತೇವೆಂದು ಹೇಳಿ ಈ ಆರೋಪಿಗಳು ಮೋಸ ಮಾಡುತ್ತಿದ್ದರು. ನಿಷೇಧಿತ ₹1000 ಮುಖಬೆಲೆಯ ನೋಟುಗಳ ಜೆರಾಕ್ಸ್ ಮಾಡಿ ವಂಚಿಸುತ್ತಿದ್ದರು. 5 ಕೋಟಿ ರೂ. ಮುಖಬೆಲೆಯ ನಕಲಿ ನೋಟುಗಳು ವಶಕ್ಕೆ ಪಡೆದುಕೊಳ್ಳಲಾಗಿದೆ.

ಮೊದಲಿಗೆ 35 ಲಕ್ಷ ನಿಷೇಧಿತ ನೋಟು ತಂದು ಬ್ಲಾಕ್ ಅಂಡ್ ವೈಟ್ ಮಾಡಿ ವಂಚನೆಗೆ ಯತ್ನಿಸಿದ್ದಾರೆ. ಈ ವೇಳೆ ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ 1000, 500 ಮುಖಬೆಲೆಯ 70 ಲಕ್ಷ ನಿಷೇಧಿತ ನೋಟು ವಶಕ್ಕೆ ಪಡೆದಿದ್ದಾರೆ.

ಬಳಿಕ ಆರೋಪಿಗಳ ವಿಚಾರಣೆ ವೇಳೆ ಮತ್ತಷ್ಟು ಮಾಹಿತಿ ಬಹಿರಂಗವಾಗಿದ್ದು ಕಾಸರಗೋಡಿನಲ್ಲಿ ಉಳಿದ ನಕಲಿ ನೋಟು ಇಟ್ಟಿರುವುದಾಗಿ ಬಾಯಿ ಬಿಟ್ಟಿದ್ದಾರೆ. ಕಾಸರಗೋಡಿಗೆ ಹೋದಾಗ 5 ಕೋಟಿ ಜೆರಾಕ್ಸ್ ನೋಟು ಪತ್ತೆಯಾಗಿವೆ. ಅಲ್ಲದೇ ಪೊಲೀಸರು 16 ಮೂಟೆ ಪೇಪರ್ ವಶಕ್ಕೆ ಪಡೆದಿದ್ದಾರೆ. ಮಂಜುನಾಥ್, ದಯಾನಂದ ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!