Monday, June 22, 2026
spot_imgspot_img
spot_imgspot_img

ಅತ್ಯಾಚಾರ ಆರೋಪದಲ್ಲಿ ಸ್ಯಾಂಡಲ್ ವುಡ್ ನಟ ಬಂಧನ!

- Advertisement -
- Advertisement -

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಶೇಷ್ ಅಲಿಯಾಸ್ ಶೇಷಗಿರಿಯನ್ನು ವಂಚನೆ, ಅತ್ಯಾಚಾರ, ಹಲ್ಲೆ ಆರೋಪದಡಿ ಬಂಧಿಸಲಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯ ಠಾಣೆಯ ಪೊಲೀಸರು, ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿ ಕರೆತಂದಿದ್ದಾರೆ. ಹಲವು ದಿನಗಳಿಂದ ಶೇಷಗಿರಿ ತಲೆಮರೆಸಿಕೊಂಡಿದ್ದ.

ಬ್ಯಾಂಕ್‌ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ ಆರೋಪಿ ನಂತರ ಹಣ ಪಡೆದುಕೊಂಡು ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಯುವತಿ ನೀಡಿರುವ ದೂರಿನಂತೆ ನಟ ಶೇಷಗಿರಿ ಬಸವರಾಜ್​ರನ್ನು ಬಂಧಿಸಲಾಗಿದೆ. ಈ ಹಿಂದೆ ಬ್ಯಾಂಕ್ ಉದ್ಯೋಗಿ ಅಗಿದ್ದ ಬಂಧಿತ ಆರೋಪಿ, ಬ್ಯಾಂಕ್ ಕೆಲಸ ಬಿಟ್ಟು ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿದ್ದ. ಡಾರ್ಕ್, ಸಸ್ಪೆನ್ಸ್, ಕಿಲಾಡಿಗಳು, ಆಶಿಕಿ-3 ಸಿನಿಮಾಗಳಲ್ಲಿ ನಟಿಸಿದ್ದ. ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

- Advertisement -

Related news

error: Content is protected !!