Sunday, August 2, 2026
spot_imgspot_img
spot_imgspot_img

ಬಂಟ್ವಾಳ: ಖಾಸಗಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ; ಇಬ್ಬರು ಗಂಭೀರ!

- Advertisement -
- Advertisement -

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು- ಪೊಳಲಿ ರಸ್ತೆಯ ಕಲ್ಪನೆ ಎಂಬಲ್ಲಿ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತಸಂಭವಿಸಿದೆ. ಅಪಘಾತದಲ್ಲಿ ಆಟೋ ಚಾಲಕ ಹಾಗೂ ಪ್ರಯಾಣಿಕ ಗಂಭೀರ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಗಾಯಗೊಂಡವರನ್ನು ನೇರಳಕಟ್ಟೆ ನಿವಾಸಿ ಮುಹಮ್ಮದ್ ನಿಹಾಲ್ ಮತ್ತು ಮುಹಮ್ಮದ್ ಹನೀಫ್ ಎನ್ನಲಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಳಲಿಯಿಂದ ಬಿ.ಸಿ.ರೋಡ್ ಕಡೆ ಬರುತ್ತಿದ್ದ ಶುಭಲಕ್ಷ್ಮೀ ಬಸ್ ಹಾಗೂ ಬಿ.ಸಿ.ರೋಡ್ ನಿಂದ ಅಡ್ಡೂರು ಕಡೆ ತೆರಳುತ್ತಿದ್ದ ಆಟೋ ರಿಕ್ಷಾ ನಡುವೆ ಕಲ್ಪನೆ ಇಳಿಜಾರು ಪ್ರದೇಶದಲ್ಲಿ ಡಿಕ್ಕಿ ಸಂಭವಿಸಿದೆ. ರಿಕ್ಷಾ ಚಾಲಕ ನಿಹಾಲ್ ಮತ್ತು ಪ್ರಯಾಣಿಕ ಹನೀಫ್ ಮದುವೆ ಕಾರ್ಯಕ್ರಮ ಒಂದಕ್ಕೆ ತೆರಳುತ್ತಿದ್ದರು. ಎಂದು ತಿಳಿದುಬಂದಿದೆ. ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

- Advertisement -

Related news

error: Content is protected !!