- Advertisement -
- Advertisement -


ಕೊಡಗು: ಸಹೋದರಿಯರಿಬ್ಬರು ಕೆರೆಗೆ ಹಾರಿ ಪ್ರಾಣ ಬಿಟ್ಟ ಘಟನೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿ. ಶೆಟ್ಟಿಗೇರಿ ಗ್ರಾಮದ ನಾಮೇರ ಉದಯ ಎಂಬುವರ ಪುತ್ರಿಯರಾದ ದಮಯಂತಿ(20) ಮತ್ತು ಹರ್ಷಿತಾ(18) ಮೃತ ಅಕ್ಕ-ತಂಗಿ.ಹಳ್ಳಿಗಟ್ಟು ಸಿಇಟಿ ಕಾಲೇಜಿನಲ್ಲಿ ಅಕ್ಕ ದಮಯಂತಿ ಇಂಜಿನಿಯರಿಂಗ್ ಓದುತ್ತಿದ್ದಳು. ಕಾವೇರಿ ಕಾಲೇಜಿನಲ್ಲಿ ಹರ್ಷಿತಾ ಪ್ರಥಮ ವರ್ಷದ ಬಿಎ ವಿದ್ಯಾರ್ಥಿನಿಯಾಗಿದ್ದಳು.
ಅಕ್ಕ-ತಂಗಿ ಇಬ್ಬರು ಕೆರೆಗೆ ಹಾರಿ ಪ್ರಾಣಬಿಟ್ಟಿದ್ದು ಏತಕ್ಕಾಗಿ ಎಂಬ ಪ್ರಶ್ನೆ ಗಾಢವಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ಲಭ್ಯವಾಗಿಲ್ಲ. ಆದರೆ, ಕೌಟುಂಬಿಕ ಕಲಹ ಹಿನ್ನೆಲೆ ಬೇಸತ್ತು ಅಕ್ಕ-ತಂಗಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


- Advertisement -








