
ಬೆಂಗಳೂರು: ಕರ್ನಾಟಕದಲ್ಲಿ ಹಿಂಗಾರು ಮಳೆ ಶುರುವಾಗಿದ್ದು, ಇಂದಿನಿಂದ ನವೆಂಬರ್ 6ರವರೆಗೂ ಮಳೆ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಮಲೆನಾಡಿನ ಜಿಲ್ಲೆಗಳ ಜತೆಗೆ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ ಜಿಲ್ಲೆಗಳಲ್ಲೂ ಹಳದಿ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕೊಂಕಣ ಕರಾವಳಿ, ಗೋವಾ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇಂದಿನಿಂದ 3 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕನ್ಯಾಕುಮಾರಿ ಮತ್ತು ಶ್ರೀಲಂಕಾ ಕರಾವಳಿಯ ಉತ್ತರ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶವಿದೆ. ದಕ್ಷಿಣ ಒಳನಾಡು ಮತ್ತು ತಮಿಳುನಾಡಿನ ಕರಾವಳಿ, ಪುದುಚೇರಿ ಮತ್ತು ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರ್ನಾಟಕ, ಲಕ್ಷದ್ವೀಪ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲೂ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಇಂದು ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗುವುದರಿಂದ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಕೂಡ ನವೆಂಬರ್ 6ರವರೆಗೆ ಮಳೆ ಹೆಚ್ಚಾಗಲಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಇಂದು ಒಣಹವೆ ಮುಂದುವರಿಯಲಿದೆ. ಇಂದಿನಿಂದ ನ. 6ರವರೆಗೆ ಗುಡುಗು ಸಿಡಿಲು ಸಹಿತ ಮಳೆ, ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು, ಸಿಡಿಲು ಹೆಚ್ಚಾಗಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ.
ಇಂದು ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ರಾಯಲಸೀಮೆ, ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗಲಿದೆ. ತಮಿಳುನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ಕರ್ನಾಟಕ, ಕೇರಳ, ಗೋವಾ, ದಕ್ಷಿಣ ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಇಂದು ಕೇರಳದ ಬಹುತೇಕ ಸ್ಥಳಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನವೆಂಬರ್ 6ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ ಮತ್ತು ಮಾಹೆ, ದಕ್ಷಿಣ ಒಳನಾಡಿನ ಕರ್ನಾಟಕ, ಕರಾವಳಿ ಆಂಧ್ರ ಪ್ರದೇಶ ಮತ್ತು ಯಾನಂ ಮತ್ತು ರಾಯಲಸೀಮಾದಲ್ಲಿ ಪ್ರತ್ಯೇಕವಾದ ಭಾರೀ ಮಳೆಯ ಮುನ್ಸೂಚನೆ ಇದೆ. ತೆಲಂಗಾಣ ಮತ್ತು ಕರಾವಳಿ ಕರ್ನಾಟಕದಲ್ಲಿ ನವೆಂಬರ್ 6ರವರೆಗೆ ಮಳೆ ಮುಂದುವರೆಯಲಿದೆ. ದಕ್ಷಿಣ ಭಾರತದಲ್ಲಿ ಇನ್ನೂ 3 ದಿನ ಮಳೆ ಮುಂದುವರೆಯಲಿದೆ.
ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಗೋವಾ, ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಛತ್ತೀಸ್‌ಗಢ, ಮಹಾರಾಷ್ಟ್ರ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಸಿಕ್ಕಿಂ, ಉತ್ತರಾಖಂಡ ಮತ್ತು ಲಡಾಖ್‌ನಲ್ಲಿ ಪ್ರತ್ಯೇಕವಾದ ಮಳೆ ಮತ್ತು ಸ್ಥಳೀಯವಾಗಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.











