Wednesday, July 29, 2026
spot_imgspot_img
spot_imgspot_img

ಚಾರ್ಮಾಡಿ: ಚಲಿಸುತ್ತಿದ್ದ ಬೈಕ್ ನ ಮೇಲೆ ಉರುಳಿ ಬಿದ್ದ ಮರ; ಸವಾರ ಸಾವು!

- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಚಾರ್ಮಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಉರುಳಿ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಸವಾರ ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ನವೀನ್(24) ಎನ್ನಲಾಗಿದೆ.

ರಾಮನಗರದಿಂದ ಧರ್ಮಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬೃಹತ್ ಗಾತ್ರದ ಮರವೊಂದು ಬೈಕ್ ಮೇಲೆ ಬಿದ್ದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನವೀನ್ ನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!