Tuesday, July 28, 2026
spot_imgspot_img
spot_imgspot_img

ಬಂಟ್ವಾಳ: ಮರ ಕಡಿಯುವ ವೇಳೆ ಆಕಸ್ಮಿಕವಾಗಿ ತೆಂಗಿನ ಮರ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

- Advertisement -
- Advertisement -

ಬಂಟ್ವಾಳ: ಮರ ಕಡಿಯುವಾಗ ಆಕಸ್ಮಿಕವಾಗಿ ಮೈಮೇಲೆ ತೆಂಗಿನ ಮರ ಬಿದ್ದು ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪೆರ್ಲಾಪು ನಿವಾಸಿ ಸುರೇಶ್(38) ಮೃತಪಟ್ಟ ವ್ಯಕ್ತಿಯಾಗಿದ್ದಾನೆ.

ಸುರೇಶ್ ಎಂಬಾತ ನೆರೆ ಮನೆಯ ಬೆಂಗದಡಿ ಭುಜಂಗ ಶೆಟ್ಟಿ ಅವರ ಮನೆಯ ತೋಟದಲ್ಲಿದ್ದ ತೆಂಗಿನ ಮರವನ್ನು ಕಡಿಯಲು ಲಕ್ಷಣ ಅವರ ಜೊತೆ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮಧ್ಯಾಹ್ನ ತೆಂಗಿನ ಮರ ಕಡಿದು ನೆಲಕ್ಕೆ ಬಿದ್ದಾಗ, ಅದರ ಪಕ್ಕದಲ್ಲೆ ಇದ್ದ ಸತ್ತ ಒಣಗಿದ ತೆಂಗಿನ ಮರ ಆಕಸ್ಮಿಕವಾಗಿ ಸುರೇಶ್ ಅವರ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!