- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆಗೆ ಮಂಗಳೂರಿನ ಆಂತರಿಕ ಭದ್ರತಾ ವಿಭಾಗದಲ್ಲಿ ಈ ಹಿಂದೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಜೀವ ಪುರುಷ ಇವರು ವಿಟ್ಲ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ತನಿಖೆ-1 ವಿಭಾಗಕ್ಕೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ವರ್ಗಾವಣೆಗೊಂಡು ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿಂದೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಒಬ್ಬರು ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಒಬ್ಬರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ವಿಟ್ಲ ಪರಿಸದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಇನ್ನೊಬ್ಬ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಧಿಕಾರ ಸ್ವೀಕರಿಸಿ ಇಂದಿನಿಂದ ತಮ್ಮ ಸೇವೆಯನ್ನು ವಿಟ್ಲ ಠಾಣೆಯಲ್ಲಿ ಪ್ರಾರಂಭಿಸಿದ್ದಾರೆ.




- Advertisement -








