Tuesday, July 1, 2025
spot_imgspot_img
spot_imgspot_img

ಪ್ರಿಯಕರನನ್ನು ಭೇಟಿಯಾಗಲು ಮನೆಗೆ ಬಂದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪ್ರಿಯತಮನ ತಂದೆ!

- Advertisement -
- Advertisement -

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ತಂದೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

ಆರೋಪಿ ವಿರುದ್ಧ ಸಂತ್ರಸ್ತೆ ತಾಯಿ ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದು, ಅಪ್ರಾಪ್ತೆ ಪ್ರಿಯಕರನನ್ನು ಹುಡುಕಿಕೊಂಡು ಮನೆಗೆ ಹೋಗಿದ್ದಾಗ ಆತನ ತಂದೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಪ್ರಿಯಕರನನ್ನು ಹುಡುಕಿಕೊಂಡು ಸಂತ್ರಸ್ತೆ ಮನೆಗೆ ಹೋಗಿದ್ದಾಳೆ. ಈ ವೇಳೆ ಕೆಲಸಕ್ಕೆ ಹೋಗಿದ್ದಾನೆ ರಾತ್ರಿ ಬರುವುದಾಗಿ ಆರೋಪಿ ಹೇಳಿದ್ದಾನೆ. ಮನೆಯಲ್ಲೇ ಮಲಗುವಂತೆ ಹೇಳಿ ಅಪ್ರಾಪ್ತೆಯನ್ನು ಉಳಿಸಿಕೊಂಡಿದ್ದಾನೆ. ಆಗ ಅಪ್ರಾಪ್ತೆ ಮೇಲೆ ಪ್ರಿಯಕರನ ತಂದೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದ್ದು, ಸದ್ಯ ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!