Saturday, August 1, 2026
spot_imgspot_img
spot_imgspot_img

ಆಟ ಆಡಲು ಹೋದ ಮೂರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು

- Advertisement -
- Advertisement -

ಮನೆಯಿಂದ ಹೊರಗೆ ಆಟವಾಡಲು ಹೋಗಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ನಿನ್ನೆ ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕಗೊ0ಡ ಪೋಷಕರು ಹುಡುಕಾಟ ನಡೆಸಿದಾಗ ಈ ದುರ್ಘಟನೆ ನಡೆದಿದೆ.

ಕೆರೆ ದಡದ ಮೇಲೆ ಮಕ್ಕಳ ಬಟ್ಟೆಗಳು ಕಂಡುಬ0ದ ಹಿನ್ನೆಲೆಯಲ್ಲಿ ಪೊಲೀಸರಿಗೆ ಪೋಷಕರು ಮಾಹಿತಿ ನೀಡಿದ್ದಾರೆ.ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಮುಳುಗಿದ್ದ ಮಕ್ಕಳ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಾಲಕರ ಮೃತದೇಹಗಳನ್ನು ಕಂಡ ಪೋಷಕರ ಆಕ್ರಂಧನ ಮುಗಿಲು ಮುಟ್ಟಿತ್ತು. ಜಗಳೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

- Advertisement -

Related news

error: Content is protected !!