Saturday, June 20, 2026
spot_imgspot_img
spot_imgspot_img

ಲಾಡ್ಜ್​ ವೊಂದರಲ್ಲಿ ಆತ್ಮಹತ್ಯೆಗೆ ಶರಣಾದ ಕಾನ್ಸ್​​ಟೇಬಲ್!!

- Advertisement -
- Advertisement -

ಬೆಂಗಳೂರು: ಇಲ್ಲಿನ ಉಪ್ಪಾರಪೇಟೆಯ ಖಾಸಗಿ ಲಾಡ್ಜ್ ಕೋಣೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ನೇಣಿಗೆ ಶರಣಾದ ಕಾನ್ಸ್​​ಟೇಬಲ್ ರಂಗನಾಥ್ ಕುಮಾರ್ ಎನ್ನಲಾಗಿದೆ. ಕಾನ್ಸ್​​ಟೇಬಲ್ ರಂಗನಾಥ್ ಈ ಹಿಂದೆ ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಕಾರ್ಯನಿರ್ವಹಿಸಿದ್ದರು.

ಲಾಡ್ಜ್ ಕೋಣೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!