Monday, July 27, 2026
spot_imgspot_img
spot_imgspot_img

ತರೀಕೆರೆ: ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿ ನೀರುಪಾಲು; ಅಗ್ನಿಶಾಮಕ ದಳ ನೆರವಿನಿಂದ ಶವ ಪತ್ತೆ

- Advertisement -
- Advertisement -

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಹುಲಿತಿಮ್ಮಾಪುರ ಗ್ರಾಮದ ಬಳಿ ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿ ನೀರುಪಾಲಾದ ದಾರುಣ ಘಟನೆ ನಡೆದಿದೆ.

ಕೊಚ್ಚಿ ಹೋದ ವ್ಯಕ್ತಿಯನ್ನು ಪೊನ್ನಸ್ವಾಮಿ (45) ಎಂದು ಗುರುತಿಸಲಾಗಿದೆ.ಪೊನ್ನುಸ್ವಾಮಿ ಅವರುಹುಲಿತಿಮ್ಮಾಪುರದ ಹಳ್ಳದ ಕಿರು ಸೇತುವೆ ಮೇಲೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕಿರುಸೇತುವೆಯ ಮೇಲೆ ಭಾರೀ ಪ್ರಮಾಣದ ನೀರು ಹರಿಯುತ್ತಿದ್ದಾಗ ಅವರು ಲಿಂಗದಹಳ್ಳಿಯಿಂದ ಸಿದ್ದರಹಳ್ಳಿಗೆ ಹೋಗುತ್ತಿದ್ದರು.

ಅಗ್ನಿಶಾಮಕ ದಳದ ನೆರವಿಂದ ಕೊಚ್ಚಿ ಹೋದ ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!