Wednesday, July 22, 2026
spot_imgspot_img
spot_imgspot_img

ವಿಟ್ಲ: ಪೊಲೀಸ್ ಹೆಡ್’ ಕಾನ್ಸ್’ಟೇಬಲ್ ಸೋಮಶೇಖರ್ ಅವರಿಗೆ ವಯೋ ನಿವೃತ್ತಿ

- Advertisement -
- Advertisement -
vtv vitla
vtv vitla
vtv vitla

ವಿಟ್ಲ: ವಿಟ್ಲ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮಶೇಖರ್ ಅವರು ವಯೋನಿವೃತ್ತಿಯನ್ನು ಹೊಂದಿದ್ದಾರೆ. ಸೋಮಶೇಖರ್ ಅವರು ಕಳೆದ 28 ವರ್ಷಗಳಿಂದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇವರಿಗೆ ಪೊಲೀಸ್ ಇಲಾಖೆ ವತಿಯಿಂದ ಗೌರವಪೂರ್ವಕವಾಗಿ ಬೀಳ್ಕೊಡುಗೆ ಕಾರ್ಯಕ್ರಮ ಮಂಗಳೂರು ವರಿಷ್ಟಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು. ಈ ವೇಳೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ ಭಗವಾನ್ ಸೋನಾವಣೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಕುಮಾರ್ ಗುಣಾರೆ, ಡಿವೈಎಸ್’ಪಿ ದಿನಕರ್ ಶೆಟ್ಟಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದು ನಿವೃತ್ತ ಜೀವನಕ್ಕೆ ಶುಭಹಾರೈಸಿದರು.

ವಿಟ್ಲ ಪೊಲೀಸ್ ಠಾಣೆಯ ಇನ್ಸ್’ಪೆಕ್ಟರ್ ಹೆಚ್ ಇ ನಾಗರಾಜ್ ಹಾಗೂ ಠಾಣೆಯ ಸಿಬ್ಬಂದಿ ವರ್ಗದವರು ಸೋಮಶೇಖರ್ ಅವರ ನಿವೃತ್ತ ಜೀವನಕ್ಕೆ ಶುಭಹಾರೈಸಿದ್ದಾರೆ.

- Advertisement -

Related news

error: Content is protected !!