- Advertisement -
- Advertisement -

ಬೆಂಗಳೂರು: ನಗರದಲ್ಲಿ ಕೋಟ್ಯಂತರ ರೂಪಾಯಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅನೂಪ್ ಬಂಧಿತ ಆರೋಪಿ.

ಆರೋಪಿ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಹ್ಯಾಶ್ಆಯಿಲ್ ತಂದು ಬೆಂಗಳೂರು, ಮಂಗಳೂರು ಹಾಗೂ ಕೇರಳದಲ್ಲಿ ನಡೆಯುವ ಹೌಸ್ ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು, ಆರೋಪಿಯನ್ನು ಬಂಧಿಸಿ ಬರೋಬ್ಬರಿ ಹನ್ನೊಂದು ಕೋಟಿ ಮೌಲ್ಯದ ಹ್ಯಾಶ್ ಆಯಿಲ್ ಅನ್ನು ವಶಕ್ಕೆ ಪಡೆದಿದ್ದಾರೆ.
ಕೊಡಿಗೇಹಳ್ಳಿ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.



- Advertisement -








